ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.