ಕೀರ್ತನೆಗಳು 83:10 - ಪರಿಶುದ್ದ ಬೈಬಲ್10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅಧ್ಯಾಯವನ್ನು ನೋಡಿ |
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.