11 ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.
ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.