ಕೀರ್ತನೆಗಳು 83:18 - ಪರಿಶುದ್ದ ಬೈಬಲ್18 ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.