Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:9 - ಪರಿಶುದ್ದ ಬೈಬಲ್‌

9 ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್‍ಯಾಬೀನರಿಗೆ ಮಾಡಿದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ವಿುದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್‍ಹಳ್ಳದ ಬಳಿಯಲ್ಲಿ ಸೀಸೆರ ಯಾಬೀನ್ ಎಂಬವರಿಗೆ ಮಾಡಿದಂತೆ ಇವರಿಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:9
9 ತಿಳಿವುಗಳ ಹೋಲಿಕೆ  

ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!


ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


ಹಿರಿಯ ಮಗಳು ಗಂಡುಮಗನನ್ನು ಹೆತ್ತಳು. ಆಕೆ ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಎಲ್ಲಾ ಮೋವಾಬ್ಯರಿಗೆ ಮೋವಾಬನೇ ಮೂಲಪುರುಷ.


ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು