ಕೀರ್ತನೆಗಳು 84:3 - ಪರಿಶುದ್ದ ಬೈಬಲ್3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.