Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:8 - ಪರಿಶುದ್ದ ಬೈಬಲ್‌

8 ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು ಅನ್ನುತ್ತಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:8
4 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು