ಕೀರ್ತನೆಗಳು 85:4 - ಪರಿಶುದ್ದ ಬೈಬಲ್4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.