ಕೀರ್ತನೆಗಳು 85:6 - ಪರಿಶುದ್ದ ಬೈಬಲ್6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ? ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.