Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:8 - ಪರಿಶುದ್ದ ಬೈಬಲ್‌

8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರಿಗಿ ಮೂರ್ಖತನದಲ್ಲಿ ಬೀಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:8
29 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


“ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ.


ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.


ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.


‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.


ದೇವರು, “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.


ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು