Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:9 - ಪರಿಶುದ್ದ ಬೈಬಲ್‌

9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:9
22 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ.


ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.


ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು.


“ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


“ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು