Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:5 - ಪರಿಶುದ್ದ ಬೈಬಲ್‌

5 ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:5
32 ತಿಳಿವುಗಳ ಹೋಲಿಕೆ  

ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’


ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.


ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು