ಕೀರ್ತನೆಗಳು 87:4 - ಪರಿಶುದ್ದ ಬೈಬಲ್4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ” ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.