ಕೀರ್ತನೆಗಳು 89:19 - ಪರಿಶುದ್ದ ಬೈಬಲ್19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.