ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.