ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.