Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:23 - ಪರಿಶುದ್ದ ಬೈಬಲ್‌

23 ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಶತ್ರುಗಳನು ಸದೆಬಡಿವೆನು ಅವನ ಮುಂದೆಯೆ I ಅವನ ವಿರೋಧಿಗಳನು ಹತಮಾಡುವೆನು ಅಲ್ಲಿಯೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:23
12 ತಿಳಿವುಗಳ ಹೋಲಿಕೆ  

ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


“ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ.


ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ.


ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.


ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು