ಕೀರ್ತನೆಗಳು 89:3 - ಪರಿಶುದ್ದ ಬೈಬಲ್3 ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 [ನೀನು ನುಡಿದದ್ದೇನಂದರೆ - ] ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.