ಕೀರ್ತನೆಗಳು 89:46 - ಪರಿಶುದ್ದ ಬೈಬಲ್46 ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ? ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”