ಕೀರ್ತನೆಗಳು 89:49 - ಪರಿಶುದ್ದ ಬೈಬಲ್49 ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ? ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.