ಕೀರ್ತನೆಗಳು 89:5 - ಪರಿಶುದ್ದ ಬೈಬಲ್5 ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವದು; ನಿನ್ನ ಸತ್ಯತೆಯನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.