Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:50 - ಪರಿಶುದ್ದ ಬೈಬಲ್‌

50-51 ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ. ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆಹೆಜ್ಜೆಗೂ ಅಪಮಾನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:50
8 ತಿಳಿವುಗಳ ಹೋಲಿಕೆ  

ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.


ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.


‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು