ಕೀರ್ತನೆಗಳು 9:13 - ಪರಿಶುದ್ದ ಬೈಬಲ್13 “ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.