ಕೀರ್ತನೆಗಳು 9:19 - ಪರಿಶುದ್ದ ಬೈಬಲ್19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.