Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:15 - ಪರಿಶುದ್ದ ಬೈಬಲ್‌

15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ನಮ್ಮನ್ನು ಕುಗ್ಗಿಸಿದ ದಿವಸಗಳಿಗೂ ನಾವು ಕೇಡನ್ನು ಅನುಭವಿಸಿದ ವರುಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:15
11 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು