Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:4 - ಪರಿಶುದ್ದ ಬೈಬಲ್‌

4 ಸಾವಿರ ವರ್ಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಾವಿರ ವರುಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನಿನ ದಿನದಂತೆಯೂ ರಾತ್ರಿಯ ಜಾವದಂತೆಯೂ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಾವಿರ ವರ್ಷಗಳು ನಿಮ್ಮ ದೃಷ್ಟಿಗೆ ಕಳೆದುಹೋದ ಒಂದು ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:4
7 ತಿಳಿವುಗಳ ಹೋಲಿಕೆ  

ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.


ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು