ಕೀರ್ತನೆಗಳು 91:11 - ಪರಿಶುದ್ದ ಬೈಬಲ್11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು. ಅಧ್ಯಾಯವನ್ನು ನೋಡಿ |
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.