Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:15 - ಪರಿಶುದ್ದ ಬೈಬಲ್‌

15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:15
31 ತಿಳಿವುಗಳ ಹೋಲಿಕೆ  

‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು