Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:4 - ಪರಿಶುದ್ದ ಬೈಬಲ್‌

4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:4
14 ತಿಳಿವುಗಳ ಹೋಲಿಕೆ  

ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.


ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.


ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು