ಕೀರ್ತನೆಗಳು 94:20 - ಪರಿಶುದ್ದ ಬೈಬಲ್20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ? ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.