ಕೀರ್ತನೆಗಳು 94:23 - ಪರಿಶುದ್ದ ಬೈಬಲ್23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು. ಅಧ್ಯಾಯವನ್ನು ನೋಡಿ |
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”