Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:6 - ಪರಿಶುದ್ದ ಬೈಬಲ್‌

6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:6
37 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.


ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,


ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.


ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.


ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ.


ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.


ಸೊಲೊಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೊಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೊಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದುನಿಂತನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.


ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.


ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


“ನೀನು ನನಗೆ ಅಡ್ಡಬಿದ್ದು ಆರಾಧಿಸಿದರೆ ನಾನು ಅವೆಲ್ಲವನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.


ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.


ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.


ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು