ಕೀರ್ತನೆಗಳು 95:7 - ಪರಿಶುದ್ದ ಬೈಬಲ್7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.