Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:10 - ಪರಿಶುದ್ದ ಬೈಬಲ್‌

10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:10
30 ತಿಳಿವುಗಳ ಹೋಲಿಕೆ  

ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.


ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು