ಕೀರ್ತನೆಗಳು 96:13 - ಪರಿಶುದ್ದ ಬೈಬಲ್13 ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.