ಕೀರ್ತನೆಗಳು 96:4 - ಪರಿಶುದ್ದ ಬೈಬಲ್4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.