ಕೀರ್ತನೆಗಳು 96:8 - ಪರಿಶುದ್ದ ಬೈಬಲ್8 ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆತನ ನಾಮಕೆ ತನ್ನಿ ಘನತೆಗೌರವವನು I ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.