Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:7 - ಪರಿಶುದ್ದ ಬೈಬಲ್‌

7 ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:7
19 ತಿಳಿವುಗಳ ಹೋಲಿಕೆ  

ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!


“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.


ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು.


“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು