Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:1 - ಪರಿಶುದ್ದ ಬೈಬಲ್‌

1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:1
39 ತಿಳಿವುಗಳ ಹೋಲಿಕೆ  

“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.


ಆತನಿಗೆ ಹೊಸ ಹಾಡನ್ನು ಹಾಡಿರಿ! ಹಾರ್ಪ್‌ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ.


ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.


ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು.


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.


ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.


ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ. ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಹೀಗೆ ಪ್ರಭುವಿನ ವಾಕ್ಯವು ಶಕ್ತಿಯುತವಾದ ರೀತಿಯಲ್ಲಿ ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದಾಗಿ ಹೆಚ್ಚುಹೆಚ್ಚು ಜನರು ನಂಬಿಕೊಂಡರು.


ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!


ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.


ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು