ಕೀರ್ತನೆಗಳು 99:1 - ಪರಿಶುದ್ದ ಬೈಬಲ್1 ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.