Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:3 - ಪರಿಶುದ್ದ ಬೈಬಲ್‌

3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:3
20 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


“ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.


ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.


ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು