ಕೀರ್ತನೆಗಳು 99:8 - ಪರಿಶುದ್ದ ಬೈಬಲ್8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.