Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:14 - ಪರಿಶುದ್ದ ಬೈಬಲ್‌

14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಚ್ಯಾಕ್ನಾ ಅಮ್ಕಾ ಸುಟ್ಕಾ ಗಾವ್ತಾ ಮಟ್ಲ್ಯಾರ್, ಪಾಪಾಕ್ನಾ ಮಾಪಿ ದಿವ್ನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:14
32 ತಿಳಿವುಗಳ ಹೋಲಿಕೆ  

ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ಈ ಜನರ ನಂಬಿಕೆಯನ್ನು ನೋಡಿ ಯೇಸು ಆ ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು