ಕೊಲೊಸ್ಸೆಯವರಿಗೆ 1:16 - ಪರಿಶುದ್ದ ಬೈಬಲ್16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಭೂಪರಲೋಕಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನಗಳಾಗಲಿ ಪ್ರಭುತ್ವಗಳಾಗಲಿ ದೊರೆತನಗಳಾಗಲಿ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನ ಮುಖಾಂತರವಾಗಿಯೂ ಆತನಿಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜಿಮ್ನಿರ್ ಅನಿ ಸರ್‍ಗಾತ್ ಹೊತ್ತೆ ಸಗ್ಳೆ ದಿಸ್ತಲೆ ಅನಿ ದಿಸಿ ನಸಲೆ, ಆತ್ಮಿಕ್ ಬಳಾ, ಪದ್ವಿಯಾ ಸಗ್ಳಿ ತೆಚ್ಯಾ ಬಳಾನ್ ರಚುನ್ ಹೊಲ್ಯಾತ್, ಸಗ್ಳೆಬಿ ತೆಚ್ಯಾ ವೈನಾ ತೆಚ್ಯಾಸಾಟ್ನಿ ರಚುನ್ ಹೊಲಾ. ಅಧ್ಯಾಯವನ್ನು ನೋಡಿ |
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.