Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:21 - ಪರಿಶುದ್ದ ಬೈಬಲ್‌

21 ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳನ್ನು ಮಾಡುವವರಾಗಿ ದ್ವೇಷಮನಸ್ಸುಳ್ಳವರೂ ಆಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಕ್ ಎಳಾರ್ ತುಮಿ ದೆವಾಕ್ನಾ ಎಗ್ಳುನ್ ಬುರ್ಶಿ ಕಾಮಾ ಕರಿತ್ ತುಮ್ಚ್ಯಾ ಮನಾತ್ನಿ ಬುರ್ಶೆ ಚಿಂತುನ್ಗೆತ್ ದೆವಾಕ್ ದುಸ್ಮಾನಾ ಹೊಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:21
14 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.


ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.


ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು