Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:3 - ಪರಿಶುದ್ದ ಬೈಬಲ್‌

3 ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-5 ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ತುಮ್ಚ್ಯಾಸಾಟ್ನಿ ಮಾಗ್ನಿ ಕರ್ತನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್ ದೆವಾಕ್ ಧನ್ಯವಾದ್ ಮನ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:3
16 ತಿಳಿವುಗಳ ಹೋಲಿಕೆ  

ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ


ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು