ಕೊಲೊಸ್ಸೆಯವರಿಗೆ 2:1 - ಪರಿಶುದ್ದ ಬೈಬಲ್1 ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಮ್ಕಾ ಮಜತ್ ಕರುಚೆ ಮನುನ್ ಮಿಯಾ ಲೈ ಖಟ್ಪಟ್ ಕರುಕ್ ಲಾಗಲ್ಲೆ ತುಮ್ಕಾ ಗೊತ್ತ್ ರ್‍ಹಾವ್ಚೆ ಮನ್ತಲಿ ಮಾಜಿ ಆಶಾ ಅನಿ ಮಿಯಾ ಲವೊದಿಸಿಯಾತ್ ಹೊತ್ತ್ಯಾಕ್ನಿ ಅನಿ ಮಾಕಾ ಬಗುಕುಚ್ ನಸಲ್ಲ್ಯಾಕ್ನಿಬಿ ಮಜತ್ ಕರುಕ್ ಖಟ್ಪಟ್ ಕರುಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.