Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:13 - ಪರಿಶುದ್ದ ಬೈಬಲ್‌

13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ತುಮ್ಚ್ಯಾ ಪಾಪಾಂಚಾಸಾಟ್ನಿ ಅನಿ ಪಾಪಾಚ್ಯಾ ಗುಲಾಮಾಗಿರಿತ್ನಾ ಅಜುನ್ ಸುಟ್ಕಾ ಘೆಯ್ನಸ್ತಾನಾ ಹೊತ್ತ್ಯಾಸಾಟ್ನಿ, ಆತ್ಮಿಕ್ ರಿತಿನ್ ಮರಲ್ಲ್ಯಾಸಿ, ಖರೆ ದೆವಾನ್ ತುಮ್ಕಾ ಕ್ರಿಸ್ತಾಚ್ಯಾ ವೈನಾ ಜಿವ್ ದಿಲ್ಯಾನ್ ಅನಿ ಅಮ್ಚಿ ಪಾಪಾ ಸಗ್ಳಿ ಮಾಪ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:13
36 ತಿಳಿವುಗಳ ಹೋಲಿಕೆ  

ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.


ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು.


ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತೈಸಿದೆ. ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ.


ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.


ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?


ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.


ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು