ಕೊಲೊಸ್ಸೆಯವರಿಗೆ 2:14 - ಪರಿಶುದ್ದ ಬೈಬಲ್14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮ್ಚ್ಯಾ ವರ್‍ತಿ ಚುಕೆಚೊ ಅಪರಾದ್ ಘಾಟಲ್ಲ್ಯಾ ಹುಕುಮಾ ಸಾರ್ಕೆ ಹೊತ್ತ್ಯಾ ಚಿಟಿಕ್ ದೆವಾನ್ ಪುಸುನ್ ಟಾಕುನ್, ತೆಕಾ ಕುರ್ಸಾರ್ ಮಾರುನ್ ನಾ ಹೊಯ್ ಸಾರ್ಕೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |