Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:15 - ಪರಿಶುದ್ದ ಬೈಬಲ್‌

15 ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ಅಪ್ನಾಕ್ ವಿರೊದ್ ಹೊವ್ನ್ ಹೊತ್ತ್ಯಾ ರಾಜಾಕ್ನಿ ಅನಿ ಅದಿಕಾರ್‍ಯಾಕ್ನಿ ಹಾರ್ವುನ್; ಖಾಲಿ ಹಾತಾನಿ ಕಾಯ್ಬಿ ನತ್ತ್ಯಾಂಚ್ಯಾ ಸಾರ್ಕೆ ಕರುನ್, ಕುರ್ಸಾಚ್ಯಾ ವೈನಾ ಹಾರ್ವುನ್ ಭಹಿರಂಗಾಕ್ ಹಾನ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:15
25 ತಿಳಿವುಗಳ ಹೋಲಿಕೆ  

ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”


ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.


ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.


ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು